ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

Webnews kannada:ಸಾಸ್ತಾನ ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಅನುಗ್ರಹ ಸಭಾಂಗಣದಲ್ಲಿ ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು
ಬರವಣಿಗೆಯಲ್ಲಿ ವಾಸ್ತವಾಂಶ, ಜವಾಬ್ದಾರಿ ಇರಲಿ
ಇಂದು ಪತ್ರಿಕಾ ರಂಗದಲ್ಲಿ ಬದಲಾವಣೆ ಆಗಿದೆ. ಬರವಣಿಗೆಯಲ್ಲಿ ಜವಾಬ್ದಾರಿ ಮತ್ತು ವಾಸ್ತವಾಂಶ ಇರಬೇಕು ಎಂದು ಮಾಜಿ‌ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು.
ಜನಾಭಿಪ್ರಾಯ ಮೂಡಿಸುವ ಕೆಲಸ ಪತ್ರಿಕೆ, ಮಾಧ್ಯಮಗಳು ಮಾಡುತ್ತವೆ. ಅದ್ದರಿಂದ ಸಮಾಜಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ನೈಜತೆಯ ಸುದ್ದಿಯನ್ನು ನೀಡುವತ್ತ ಪತ್ರಿಕಾರಂಗ ಇರಬೇಕು ಎಂದ ಅವರು
ವಡ್ಡರ್ಸೆ ಅವರು ಹಿಂದುಳಿದ ವರ್ಗದವರ ಬಗ್ಗೆ ಹೆಚ್ಚಿನ ಒಲವು ತೋರಿಸಿದ್ದರು ಎಂದು ಹೇಳಿದರು. ಸಮಾರಂಭವನ್ನು ಉದ್ಘಾಟಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಡ್ಡರ್ಸೆ ರಘುರಾಮ ಶೆಟ್ಟಿ ಅವರು ಪತ್ರಿಕೆಗೆ ಮೌಲ್ಯವನ್ನು ತಂದು ಕೊಟ್ಟವರು. ಇಂದಿನ ಪತ್ರಕರ್ತರಿಗೆ ಮಾದರಿ ಮತ್ತು ಪ್ರೇರಕರಾಗಿದ್ದರು ಎಂದು ಹೇಳಿದರು.ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಣತೆ ವಹಿಸಿದ್ದರು.
ಇದೇ ಸಂದರ್ಭ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭ ಸಂಘದ ಪ್ರಭಾಕರ ಆಚಾರ್ಯ, ಮೋಹನ್ ಉಡುಪ ಮತ್ತು ಪ್ರವೀಣ ಮುದ್ದೂರು ಅವರನ್ನು ಗೌರವಿಸಲಾಯಿತು.
ಉಡುಪಿ ಶಾಸಕ ಯಶಪಾಲ್ ಸುವರ್ಣ, ಬ್ರಹ್ಮಾವರ ಬಂಟರ ಸಂಘದ ಸಂಚಾಲಕ‌ ಬಿ.ಭುಜಂಗ ಶೆಟ್ಟಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರತಿನಿಧಿ ಆಸ್ಟ್ರೋ ಮೋಹನ್ , ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,‌ಕುಂದಾಪುರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ
ಇದ್ದರು.
ಕಾರ್ಯಕ್ರಮದ ಸಂಚಾಲಕ ವಸಂತ ಗಿಳಿಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹರೀಶ ಕಿರಣ್ ತುಂಗ ವಂದಿಸಿದರು. ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *