ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆ, ಉಜಿರೆಗೆ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ…

Read More

ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆ ಇವರ ಆಶ್ರಯದಲ್ಲಿ ನಡೆದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಹಾಗೂ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರರಾದ ಶ್ರಿಯುತ ಲಕ್ಷ್ಮೀ ನಾರಾಯಣ ರಾವ್ ಅವರು ಮಾತನಾಡಿ, ವೃತ್ತಿಯಲ್ಲಿ ಶಿಸ್ತು, ಸೇವಾಭಾವ ಹಾಗೂ ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಅನುಭವ ಗಳಿಸಬೇಕು ಎಂದು ಸಲಹೆ ನೀಡಿದರು. ಪೂಜ್ಯ ಖಾವಂದ ಪರಿಕಲ್ಪನೆಯ ರುಡ್ ಸೆಟ್ ಸಂಸ್ಥೆ ಕೇವಲ ತಾಂತ್ರಿಕ ತರಬೇತಿಗೆ…

Read More

ತುಳು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಶೀಘ್ರ ಘೋಷಣೆ:

ರಾಜ್ಯದಲ್ಲಿ ತುಳು ಭಾಷೆಯನ್ನು ರಾಜ್ಯದ ೨ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಆದಷ್ಟು ಶೀಘ್ರ ಘೋಷಣೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಅಶೋಕ್ ರೈ ಪ್ರಶ್ನೆಗೆ ಉತ್ತರಿಸಿದ ಸಚಿವರು, ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಚರ್ಚಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು. ತುಳು ಭಾಷೆಯ ಸ್ವರೂಪ ಮತ್ತು ಇತಿಹಾಸ, ತುಳು ಸಾಹಿತ್ಯ…

Read More

ಮುಂದಿನ ಶೈಕ್ಷಣಿಕ ವರ್ಷಕ್ಕೆ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ

ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸೋಮವಾರ ತಿಳಿಸಿದ್ದಾರೆ.ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಅವರು ಹೇಳಿದರು. ಶಿವಮೊಗ್ಗ…

Read More

ರೋಡಲ್ಲೇ ಬಟ್ಟೆ ಬಿಚ್ಚಿ ಹೊಡಿತೀನಿ ಎಂದ ಮಾಲೀಕ; ಆರೋಪಿ ಸೈಯದ್ ಪೊಲೀಸರ ವಶಕ್ಕೆ!

ಬೆಂಗಳೂರು: ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ಸೈಬರ್ ಸೆಂಟರ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಸೈಯದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್ ಸೆಂಟರ್ ಮಾಲೀಕ ಸೈಯದ್ ಸಾರ್ವಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಐದು ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದರೂ, ಕೆಲಸಕ್ಕೆ ರಜೆ ಹಾಕಿದ ವಿಷಯಕ್ಕೆ ಸಂಬಂಧಿಸಿದಂತೆ…

Read More

ಭರತ್‌ರಾಜ್ ಎಸ್. ನೇಜಾರ್ ಅವರಿಗೆ ಅರ್ಥಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ(Doctor of Philosophy (PhD) in Economics from Kuvempu University)

ಉಡುಪಿ:ಬ್ರಹ್ಮಾವರದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಭರತ್‌ರಾಜ್ ಎಸ್. ನೇಜಾರ್ ರವರು ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಪಡೆದಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. ಬಿ. ಜಯರಾಮ ಭಟ್ ಅವರ ಮಾರ್ಗದರ್ಶನದಲ್ಲಿ “ಗ್ರಾಮೀಣ ಅಭಿವೃದ್ಧಿಯಲ್ಲಿ ರಸ್ತೆಗಳ ಪಾತ್ರ – ಉಡುಪಿ ಜಿಲ್ಲೆಯಲ್ಲಿ ಒಂದು ಅಧ್ಯಯನ”(Role of Roads in Rural Development- A Study…

Read More

ಬ್ರಹ್ಮಾವರ ಆಭರಣ ಜ್ಯುವೆಲ್ಲರ್ಸ್ ನಿಂದ ಯೋಧರಿಗೆ ಗೌರವ ಸನ್ಮಾನ.

ಕೋಟ: ಬ್ರಹ್ಮಾವರದ ಆಭರಣ ಜ್ಯುವೆಲ್ಲರ್ಸ್ ನ ಮಳಿಗೆಯಲ್ಲಿ ಸೈನಿಕ ದಿನಾಚರಣೆಯ ಸಂಭ್ರಮದಿಂದ ಆಚರಿಸಲಾಯಿತು.ಮಳಿಗೆಯ ಪ್ರಬಂಧಕರಾದ ಗಣೇಶ್ ಪ್ರಭು ಅವರ ನೇತೃತ್ವದಲ್ಲಿ ಮಾಜಿ ಸೈನಿಕರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸನ್ಮಾನ ಸ್ವೀಕರಿಸಿದ ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಯ ಸುರೇಶ್ ಸಿ ರಾವ್ ಅವರು ಮಾತನಾಡಿ ಉಡುಪಿ ಜಿಲ್ಲೆಯ ಆಭರಣ ಜ್ಯುವೆಲ್ಲರ್ಸ್ ನವರು ಸೈನಿಕರನ್ನು ಗುರುತಿಸಿ ಅವರ ಕಾರ್ಯವನ್ನು ಗುರುತಿಸಿದ್ದು ತುಂಬಾ ವಿಶೇಷ ಸಂಗತಿಯಾಗಿದೆ. ಹಾಗೆಯೇ ದೇಶದ ರಕ್ಷಣೆಯಲ್ಲಿ ತೊಡಗಿರುವ ಎಲ್ಲಾ ಸೈನಿಕರನ್ನು ಕೂಡ…

Read More

ಹೊಸ ರೇಷನ್ ಕಾರ್ಡ್‌ ನಿರೀಕ್ಷೆಯಲ್ಲಿರುವವರಿಗೆ ಗುಡ್‌ನ್ಯೂಸ್

ಹೊಸ ರೇಷನ್ ಕಾರ್ಡ್‌ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮುಂದಿನ ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಭಾನುವಾರ ಹೇಳಿದ್ದಾರೆ. ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷ್ಕರಣೆ ಸೇರಿ ನಾನಾ ಕಾರಣಗಳಿಂದ ಕಳೆದ ಎರಡೂವರೆ ವರ್ಷದಿಂದ ಹೊಸ ಪಡಿತರ ಚೀಟಿ ನೀಡಲು ಸಾಧ್ಯವಾಗಿಲ್ಲ. ಸುಮಾರು 2.5ರಿಂದ 3ಲಕ್ಷ ಅರ್ಜಿ ಗಳು ಸದ್ಯ ಬಾಕಿ ಇರುವ ಮಾಹಿತಿ ಇದ್ದು, ಎಲ್ಲವೂ…

Read More

ಬಾರ್ಕೂರಿನಲ್ಲಿ ಶ್ರವಣ ತಪಾಸಣೆ ಶಿಬಿರ

ಕೋಟ, ಜ.8: ನಮ್ಮೂರು ಬಾರ್ಕೂರು ಫೇಸ್ ಬುಕ್ ಫ್ರೆಂಡ್ಸ್ ಹಾಗೂ ಟೀಮ್ ಈಶ್ವರ್ ಮಲ್ಪೆ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರೋಟರಾಕ್ಟ್ ಬ್ರಹ್ಮಾವರ ಸಂಯುಕ್ತ ಆಶ್ರಯದಲ್ಲಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮರಾಮಮಂದಿರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನ, ಬಾರ್ಕುರಿನಲ್ಲಿ ನಡೆಯಿತು ವೈದ್ಯರಾದ ಅಂಕಿತ ಕಲ್ಮಾಡಿ ಮಾತನಾಡಿ, ಕಿವಿಯ ಬಗ್ಗೆ ಕಾಳಜಿ ಅತೀ ಅಗತ್ಯ. ಕಿವುಡರಾಗಿ ಜೀವನ ನಡೆಸುವುದು ತುಂಬಾ ಕಷ್ಟ ಎಂದರು. ನಮ್ಮೂರು ಬಾರ್ಕೂರು ಫೇಸ್ ಬುಕ್ ಫ್ರೆಂಡ್ಸ್ ಅಡ್ಮಿನ್…

Read More