ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್

ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ 

Webnews kannada -www.webnewskannada.com

ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಭಾರೀ ಚಳಿಗೆ ಉತ್ತರ ಕರ್ನಾಟಕ ಬೆಚ್ಚಿಬಿದ್ದಿದೆ. ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡೂ ದಿನಗಳ ಕಾಲ ಶೀತಗಾಳಿ ಬೀಸಲಿದೆ. ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

Leave a Reply

Your email address will not be published. Required fields are marked *