ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ

Webnews kannada -ಮಡಿಕೇರಿ, ಮಹಿಳೆಯೊಬ್ಬಳು ಕರೆದಿದ್ದಾಳೆಂದು ಮಡಿಕೇರಿಗೆ ಬಂದಿರುವ ಮಂಡ್ಯ ಜಿಲ್ಲೆ ಮದ್ದೂರಿನ ಮಹೇಶನಿಗೆ ನರಕದ ಅನುಭವ ಎದುರಾಗಿದೆ. ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಹೇಗೋ ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ, ಓಡೋಡಿ ಬಂದು ಮಡಿಕೇರಿನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಪೊಲೀಸರು ಶಂಕಿ ವ್ಯಕ್ತಪಡಿಸಿದ್ದು, ತನಿಖೆ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಮಹೇಶಗೆ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಯುವತಿಯೊಬ್ಬಳ ಪರಿಚಯವಾಗಿತ್ತು. ಆಕೆಯ ಆಹ್ವಾನದ ಮೇರೆಗೆ ಶುಕ್ರವಾರ ಸಂಜೆ ಮಡಿಕೇರಿಗೆ ಬಂದ ಮಹೇಶ, ಒಂಟಿಯಾಗಿ ಇದ್ದುದನ್ನು ಗಮನಿಸಿದ ಮಹಿಳೆ ಮಡಿಕೇರಿಯ ಮಂಗಳಾದೇವಿ ನಗರದ ಮನೆಯೊಂದಕ್ಕೆ ಕರೆಸಿಕೊಂಡಿದ್ದಾಳೆ.ಕೆಲಕಾಲ ಮಾತನಾಡಿ
ಅಚಾನಕ್ ಫೋನ್ ಕರೆ ಬಂದ ಕಾರಣ ಸಂಬಂಧಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಿ ಹೊರಟಿದ್ದಾಳೆ. ಅದೇ ಸಮಯದಲ್ಲಿ ರೂಮಿಗೆ ನುಗ್ಗಿದ ನಾಲ್ವರು ಯುವಕರು ಮಹೇಶ ಬಳಿ ಇದ್ದ ಹಣ ಹಾಗೂ ವಸ್ತುಗಳನ್ನು ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ.ಬಳಿಕ ಭಾರೀ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ. ಬಳಿಕ ಮೂತ್ರ ಮಾಡುತ್ತೇನೆಂದು ಹೇಳಿ ಗ್ಯಾಂಗ್ನಿಂದ ತಪ್ಪಿಸಿಕೊಂಡ ಮಹೇಶ್, ಮನೆಯಿಂದ ಹೊರಗೆ ಓಡಿಬಂದಿದ್ದಾನೆ. ಆದರೂ ಆರೋಪಿಗಳು ಆಟೋದಲ್ಲಿ ಅಪಹರಣಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾದ ಮಹೇಶ್, ಅರೆಬೆತ್ತಲಾಗಿ ಓಡಿಬಂದು ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ
![]() |