webnews kannada

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ, ಕಾಲೇಜಿನ ರೆಡ್ ಕ್ರಾಸ್ ಸಂಘಟನೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ, ಕಾಲೇಜಿನ ರೆಡ್ ಕ್ರಾಸ್ ಸಂಘಟನೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಪ್ರಸಾದ್ ನೇತ್ರಾಲಯದಿಂದ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಸಾದ್ ನೇತ್ರಾಲಯದ ಕಣ್ಣಿನ ವೈದ್ಯರಾದ ಡಾಕ್ಟರ್ ಆಶ್ರೀತ್ ಸಿದ್ದಣ್ಣ,ವಹಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ಕಣ್ಣಿನ ಬಗ್ಗೆ ಬಹಳಷ್ಟು ಜಾಗ್ರತೆ ವಹಿಸಬೇಕು. ನೋಡುವ ನೋಟವನ್ನು ಒಂದೇ ಕಡೆ ಬಹಳಷ್ಟು ಸಮಯ ದಿಟ್ಟಿಸದೆ, ಪ್ರತಿ 20 ನಿಮಿಷಕೊಮ್ಮೆ ದೃಷ್ಟಿಯನ್ನು ಆಚೆ ಈಚೆ ನೋಡುವುದರ ಮೂಲಕ ಬದಲಿಸಬೇಕು. ಈ ರೀತಿ ಮಾಡುವುದರಿಂದ ಕಣ್ಣಿನ ಆರೋಗ್ಯ ಕಾಪಾಡಬಹುದು. ಹೆಚ್ಚು ಮೊಬೈಲ್ ನೋಡುವುದರಿಂದ ಕಣ್ಣಿಗೆ ತೊಂದರೆ ಹೆಚ್ಚು, ಕಣ್ಣನ್ನು ಸ್ವಚ್ಛವಾಗಿಟ್ಟು ಕೊಳ್ಳಬೇಕು ಹಾಗೂ ಕಣ್ಣಿಗೆ ಬೇಕಾದ ಪೌಷ್ಟಿಕ ಆಹಾರ ಸೇವನೆಯಿಂದ ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸಬಹುದು ಎ0ದರು. ಕಾರ್ಯಕ್ರಮದ ವೇದಿಕೆಯಲ್ಲಿ ಇನ್ನೊರ್ವ ಅತಿಥಿ ಡಾಕ್ಟರ್ ಅಲೆಂಟಾ ಮೇರಿನ್, ಅತಿಥಿಯಾಗಿ ಉಪಸ್ಥಿತರಿದ್ದ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಮೋಹನ್ ದಾಸ್,ಹಾಗೂ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ಆಡಳಿತ ಅಧಿಕಾರಿ ಶ್ರೀಮತಿ ಮಮತಾ, ಕಾಲೇಜಿನ ಪ್ರಾ0ಶುಪಾಲರದ ಶ್ರೀಮತಿ ಡಾ,ಸೀಮಾ ಭಟ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ರಾಝಿಕ, ಹಾಗೂ ರೆಡ್ ಕ್ರಾಸ್ ಸಂಘಟನೆ ಮುಖ್ಯಸ್ಥರಾದ ಶ್ರೀಮತಿ ಶೈಲಾ ಉಪಸ್ಥಿತರಿದ್ದರು. ಈ ಕಾರ್ಯಕ್ರಮ ನಿರೂಪಣೆ, ಸ್ವಾಗತ, ಧನ್ಯವಾದಗಳನ್ನು ಶ್ರೀಮತಿ ಸ್ವಾತಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ನಡೆಸಿಕೊಟ್ಟರು..

Leave a Reply

Your email address will not be published. Required fields are marked *