webnews kannada

ನನ್ನ ಮಗಳು ತಪ್ಪು ಮಾಡಿದ್ರೆ ಅದೇ ಕೋಟೆಯಿಂದ ತಳ್ಳಿ ಬಿಡಿ – ಸಿಯಾ ಪೋಷಕರ ಆಕ್ರೋಶ

ಮುಂಬೈ: ನನ್ನ ಮಗಳು ತಪ್ಪು ಮಾಡಿದ್ರೆ ಕೇತನ್‌ನನ್ನು (Ketan) ತಳ್ಳಿ ಕೊಲೆಗೈದ ಅದೇ ಕೋಟೆಯಿಂದ ತಳ್ಳಿ ಬಿಡಿ ಎಂದು ಸಿಯಾ ಗೋಯಲ್ (Siya Goyal) ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಕೇತನ್‌ ಕೊಲೆ ಆರೋಪಿಯಾದ ಸಿಯಾಳ ತಾಯಿ ಪೂಜಾ ಗೋಯಲ್ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಮಗಳು ಸಿಯಾ, ಕೇತನ್ ಜೊತೆ ಮದುವೆ ಮಾತುಕತೆ ವೇಳೆ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ಇಬ್ಬರೂ ನವೆಂಬರ್‌ನಲ್ಲಿ ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲು ಸಿದ್ಧರಾಗಿದ್ದರು. ಕೇತನ್ ಸಾವು ಕೇವಲ ಒಂದು ಕುಟುಂಬವನ್ನು ಮಾತ್ರವಲ್ಲ, ಎರಡು ಕುಟುಂಬಗಳಿಗೂ ತೀವ್ರ ದುಃಖ ಉಂಟು ಮಾಡಿದೆ.

ಕೇತನ್‌ ಕುಟುಂಬಕ್ಕಿಂತ ಹೆಚ್ಚು ನೋವನ್ನು ನಮ್ಮ ಕುಟುಂಬ ಅನುಭವಿಸುತ್ತಿದೆ. ಆರೋಪಿ ನನ್ನ ಮಗಳಾಗಿದ್ದರೂ ಸಹ, ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಮಗಳು ತಪ್ಪಿತಸ್ಥರೆಂದು ಸಾಬೀತಾದರೆ, ಕೇತನ್‌ನನ್ನು ತಳ್ಳಿದ ಸ್ಥಳದಿಂದಲೇ ಅವಳನ್ನು ತಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಿಯಾಳ ತಂದೆ ಪ್ರವೀಣ್ ಗೋಯಲ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರೋಪಿ ನನ್ನ ಸ್ವಂತ ಮಗಳಾಗಿದ್ದರೂ, ಕೇತನ್‌ನನ್ನು ತಳ್ಳಿದ ಕೋಟೆಯಿಂದ ಅವಳನ್ನು ಕೆಳಗೆ ತಳ್ಳಬೇಕು ಎಂದಿದ್ದಾರೆ.

Leave a Reply

Your email address will not be published. Required fields are marked *