
ಸುಂದರವಾದ ಸ್ಮಾರ್ಟ್ ವಾಚ್ ನಿಮ್ಮದಾಗಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲದ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆ ಗೊಳಿಸಲಾಗಿದೆ.
ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್” ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು.
ವಿಶೇಷ ಆಹ್ವಾನಿತರಾಗಿ ಕುಂದಗನ್ನಡ ರಾಯಬಾರಿ ಮನು ಹಂದಾಡಿ(ಮನೋಹರ್ ಶೆಟ್ಟಿ) ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ ಸ್ನೇಹಕೂಟ ಮಣೂರು ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.
ಸ್ನೇಹಕೂಟ ಮಣೂರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿ ಕಡಿಮೆ ಬೆಲೆಗೆ ಉತ್ತಮವಾದ ಸ್ಮಾರ್ಟ್ ವಾಚ್ ಇಂದು ನಿಮ್ಮದಾಗಿಸಿಕೊಳ್ಳಿ





