ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ.
2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.
ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಈ ಕೆಳಗಿನ ದಾಖಲೆಗಳನ್ನು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ವಿನಂತಿಸಿದೆ. ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ.
ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ.
ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ
, ಫೆಬ್ರವರಿ 24: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸೋಮವಾರ 8 ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪುಸ್ತಕವನ್ನು ಬಿಡುಗಡೆ ಮಾಡಿದೆ. ಹೊಸ ಪುಸ್ತಕವು ನ್ಯಾಯಾಂಗ(Judiciary)ದ ಪಾತ್ರವನ್ನು ವಿವರಿಸುವ, ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಮತ್ತು ಬಾಕಿ ಇರುವ ನ್ಯಾಯಾಲಯದ ಪ್ರಕರಣಗಳಂತಹ ಸವಾಲುಗಳನ್ನು ಪರಿಹರಿಸುವ ಹೊಸ ವಿಭಾಗವನ್ನು ಒಳಗೊಂಡಿದೆ. ಈ ವಿಷಯಗಳನ್ನು ಹಳೆಯ ಪುಸ್ತಕದಲ್ಲಿ ನೇರವಾಗಿ ಉಲ್ಲೇಖಿಸದ ಕಾರಣ ಈ ಬದಲಾವಣೆಯು ಮಹತ್ವದ್ದಾಗಿದೆ. ಇಂಡಿಯನ್ ಎಕ್ಸ್ಪ್ರೆಸ್ನ ವರದಿಯ ಪ್ರಕಾರ, ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ […]
IPL ಬ್ರಾಡ್ಕಾಸ್ಟ್ ಇಂಜಿನಿಯರ್ ನಿಧನ ENGಗೆ ಸೇರಿದ IPL ಬ್ರಾಡ್ಕಾಸ್ಟ್ ಇಂಜಿನಿಯರ್ ಜಾನ್ ವಿಲಿಯಂ (76) ನಿಧನರಾಗಿದ್ದಾರೆ. ಇದೆ ತಿಂಗಳ 29ರಂದು MI-KKR ಪಂದ್ಯ ನಂತರ ಅವರು ಹೋಟೆಲ್ಗೆ ತೆರಳಿದ್ದರು. ಮರುದಿನ ಕಾಲ್ ಮಾಡಿದರೂ ಪ್ರತಿಕ್ರಿಯೆ ಇಲ್ಲದ ಕಾರಣ, ಮಾಸ್ಟರ್ ಕೀ ಬಳಸಿ ಬಾಗಿಲು ತೆರೆದಾಗ ಜಾನ್ ನೆಲದ ಮೇಲೆ ಬೈದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವರು ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಪೋಸ್ಟ್ಮಾರ್ಟಂ ವರದಿಯಲ್ಲಿ ಯಾವುದೇ ಅನುಮಾನಾಸ್ಪದ ಕಂಡುಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಶಾಲಾ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್, ಟ್ಯಾಬ್ಲೆಟ್ ಮತ್ತು ಕಂಪ್ಯೂಟರ್ಗಳ ಅತಿಯಾದ ಬಳಕೆಯನ್ನು ನಿಯಂತ್ರಿಸಲು ಹಾಗೂ ಅವರ ದೈಹಿಕ-ಮಾನಸಿಕ ಆರೋಗ್ಯವನ್ನು ಸುಧಾರಿಸಲು ತರಲು ಉದ್ದೇಶಿಸಿರುವ ಒಂದು ಪ್ರಮುಖ ಅಭಿಯಾನವೇ ‘ಡಿಜಿಟಲ್ ಡಿಟಾಕ್ಸ್’ (Digital Detox). ಇತ್ತೀಚಿನ ದಿನಗಳಲ್ಲಿ ಮಕ್ಕಳು ಆನ್ಲೈನ್ ಗೇಮ್ಸ್, ಸೋಶಿಯಲ್ ಮೀಡಿಯಾ ಮತ್ತು ರೀಲ್ಸ್ಗಳ ವ್ಯಾಮೋಹಕ್ಕೆ ಒಳಗಾಗುತ್ತಿರುವುದನ್ನು ತಡೆಯಲು ಈ ನಿಯಮವನ್ನು ಪ್ರಸ್ತಾಪಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ: 1. ಏನಿದು ‘ಡಿಜಿಟಲ್ ಡಿಟಾಕ್ಸ್’? ಸರಳವಾಗಿ ಹೇಳುವುದಾದರೆ, ಒಂದು ನಿರ್ದಿಷ್ಟ ಅವಧಿಯವರೆಗೆ ಮೊಬೈಲ್, ಇಂಟರ್ನೆಟ್, ಟಿವಿ […]