webnews kannada

ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ 

ಉಜಿರೆ, ಜುಲೈ 05: ಆಸರೆ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘ (ರಿ) ಉಜಿರೆ ಇವರ ವತಿಯಿಂದ  ರುಡ್‌ಸೆಟ್ ಸಂಸ್ಥೆ,  ಉಜಿರೆಯಲ್ಲಿ ಇಂದು ನಡೆದ “ಆಟಿಕೂಟ” ಕಾರ್ಯಕ್ರಮವು ಆಟಿ ತಿಂಗಳ ಸಾಂಪ್ರದಾಯಿಕ ತಿನಿಸುಗಳು ಹಾಗೂ ನಾಟಿ ವೈದ್ಯ ರಿಗೆ ಸನ್ಮಾನ  ಜರುಗಿತು.

ಕಾರ್ಯಕ್ರಮದಲ್ಲಿ ಹಿರಿಯ ನಾಟಿ ವೈದ್ಯ ರಾದ  * ಶ್ರೀನಿವಾಸ ಪೂಜಾರಿ* ಪೆರ್ಮುದೆ,ಕೊಯ್ಯೂರು ಅವರು ಭಾಗವಹಿಸಿ, ಆಟಿ ತಿಂಗಳ ತಿನಿಸುಗಳು ಮತ್ತು ನಾಟಿ ಜೀವನದ ಮಹತ್ವದ ಕುರಿತು ಮಾತನಾಡಿದರು. ಆಟಿ ತಿಂಗಳಲ್ಲಿ ಆರೋಗ್ಯಕರ ಆಹಾರ ಸೇವನೆಯ ಮಹತ್ವವನ್ನು ವಿವರಿಸಿದ ಅವರು, ಪೌಷ್ಟಿಕಾಂಶಯುಕ್ತ ಸಾಂಪ್ರದಾಯಿಕ ಆಹಾರಗಳು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಆಸರೆ ಸದಸ್ಯರು ತಯಾರಿಸಿ ತಂದ ವಿವಿಧ ಬಗೆಯ ಆಟಿ ತಿಂಗಳ ವಿಶೇಷ ತಿನಿಸುಗಳನ್ನು ಸವಿದು ಸಂಭ್ರಮಿಸಿದರು. ಆಟಿ ತಿಂಗಳ ಆಚರಣೆಗಳ ಹಿಂದಿರುವ ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕುರಿತು ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಯಿತು.

ಸಂಸ್ಥೆಯ ಹಿರಿಯ ಉಪನ್ಯಾಸಕರಾದ *ಅಬ್ರಹಾಂ ಜೇಮ್ಸ್*, *ಕೆ. ಕರುಣಾಕರ ಜೈನ್* *ಶ್ರೀಮತಿ ಅನಸೂಯಾ ರೈ* ಹಾಗೂ *ಸುರೇಶ್ ಗೌಡ*  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಸರೆ ಸಂಘದ ಅಧ್ಯಕ್ಷರಾದ *ಪ್ರಶಾಂತ್ ಕುದ್ಯಾಡಿ* ಸ್ಬಾಗತಿಸಿ, ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮ ವನ್ನು  *ಗೌತಮ್ ಕುಕ್ಕಾನ್* ನಿರ್ವಹಿಸಿದರು.

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *