webnews kannada

ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಿಕೊಂಡರೆ ಉದ್ಯಮದಲ್ಲಿ ಯಶಸ್ಸು ಸಾಧ್ಯ  : ರಾಜೇಶ್ ಪೈ

ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ, ದೃಢ ಸಂಕಲ್ಪ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮನೋಭಾವ ಅತ್ಯಗತ್ಯ ಎಂದು ಉಜಿರೆಯ ಸಂಧ್ಯಾ ಟ್ರೇಡರ್ಸ್‌ನ ಮಾಲಕರು ಹಾಗೂ ಸಿರಿ ಸಂಸ್ಥೆಯ ನಿರ್ದೇಶಕರಾದ *ಶ್ರೀ ರಾಜೇಶ್ ಪೈ* ಅವರು ಹೇಳಿದರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾದ *ಉದ್ಯಮಶೀಲತಾಭಿವೃದ್ಧಿ* ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿದರು. ತಮ್ಮ ಉದ್ಯಮ ಪಯಣದ ಅನುಭವಗಳನ್ನು ಹಂಚಿಕೊಂಡ ಅವರು, ಉದ್ಯಮದ ಬೆಳವಣಿಗೆ, ಸವಾಲುಗಳನ್ನು ಎದುರಿಸುವ ಬಗೆ ಹಾಗೂ ಯಶಸ್ಸಿನ ಸೂತ್ರಗಳ ಕುರಿತು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ *ಡಾ. ಅಶೋಕ ಕುಮಾರ್* ಅವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿ, ಉದ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ *ಶ್ರೀ ಬಿ.ಪಿ. ವಿಜಯ ಕುಮಾರ್* ಅವರು ಮಾತನಾಡಿ, ಇಂದಿನ ಆಧುನಿಕ ತಂತ್ರಜ್ಞಾನಗಳನ್ನು ಸಮರ್ಥವಾಗಿ ಬಳಸಿಕೊಂಡು ಉದ್ಯಮದಲ್ಲಿ ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು.

ಸಂಸ್ಥೆಯ ಹಿರಿಯ ಉಪನ್ಯಾಸಕರಾದ *ಶ್ರೀ ಅಬ್ರಹಾಂ ಜೇಮ್ಸ್*  ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮವು ಕುಮಾರಿ *ಭೂಮಿಕಾ* ಹಾಗೂ ಕುಮಾರಿ *ವೈಷ್ಣವಿ* ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ *ಸ್ವಾತಿಕ್ ಹೆಬ್ಬಾರ್* ಹಾಗೂ ಕುಮಾರಿ *ಅನನ್ಯ ಟಿ*. ಅವರು ತರಬೇತಿಯ ಅನುಭವಗಳನ್ನು ಹಂಚಿಕೊಂಡರು.

ಕೊನೆಯಲ್ಲಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ *ಕರುಣಾಕರ್ ಕೆ. ಜೈನ್*  ಅವರು ಧನ್ಯವಾದ ಸಮರ್ಪಿಸಿದರು.

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *