ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಿವಿಧ ಕಡೆ ಮನೆ ಗೋಡೆ ಕುಸಿದು 9 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ನಿರಂತರ ಮಳೆಯಿಂದಾಗಿ ಹಳೆಯ ಮನೆ ಮತ್ತು ಗೋಡೆಗಳು ಕುಸಿದು ಬಿದ್ದ ಪರಿಣಾಮ ನಾಲ್ಕು ಮಕ್ಕಳು ಹಾಗೂ ಇಬ್ಬರು ಕಂದಮ್ಮಗಳು ಸೇರಿದಂತೆ ಒಟ್ಟು 9 ಮಂದಿ ಜೀವ ಕಳೆದುಕೊಂಡಿದ್ದಾರೆ ಉತ್ತರ ಪ್ರದೇಶದ ಪ್ರತಾಪ್ಗಢ ಜಿಲ್ಲೆಯ ಮಾಹುಲಿ ಬಜಾರ್ನಲ್ಲಿ ಆಗಸ್ಟ್ 5 ಮತ್ತು 6ರ ಮಧ್ಯರಾತ್ರಿ ಸುಮಾರು 2 ಗಂಟೆಗೆ, ಸುಮಾರು 100 ವರ್ಷ ಹಳೆಯದಾದ ಮನೆಯೊಂದರಲ್ಲಿ ಕುಟುಂಬದ 7 ಸದಸ್ಯರು ಗಾಢ ನಿದ್ರೆಯಲ್ಲಿದ್ದಾಗ ಮನೆ ಏಕಾಏಕಿ ಕುಸಿದು ಬಿದ್ದಿದೆ
ಅವಶೇಷಗಳ ಅಡಿಯಿಂದ ಪ್ರಮೋದ್ ಶ್ರೀವಾಸ್ತವ್ (60), ಅವರ ಪತ್ನಿ ರೀಟಾ (55), ಮಗ ನಿತಿನ್ (25), ಸೊಸೆ ಮಾಧುರಿ (24) ಹಾಗೂ ಅಮಾನ್ ಅವರ ಇಬ್ಬರು ಪುಟ್ಟ ಮಕ್ಕಳ ಶವಗಳನ್ನು ಹೊರತೆಗೆಯಲಾಗಿದೆ. ಅದೃಷ್ಟವಶಾತ್ ಪ್ರಮೋದ್ ಅವರ ಹಿರಿಯ ಮಗ ಅಮಾನ್ (28) ಅವಶೇಷಗಳ ಅಡಿಯಿಂದ ಹೊರಬಂದು ನೆರೆಹೊರೆಯವರನ್ನು ಕರೆದು ಸಹಾಯ ಪಡೆದಿದ್ದರಿಂದ ಅವರ ಜೀವ ಉಳಿದಿದೆ.
ಬಾರಾಬಂಕಿ ಜಿಲ್ಲೆಯ ಅಲಿಯಾಬಾದ್ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ರಸ್ತೆ ಬದಿಯಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಹಳೆಯ ಇಟ್ಟಿಗೆ ಗೋಡೆ ಕುಸಿದು ಬಿದ್ದಿದೆ. ಪರಿಣಾಮ 7 ವರ್ಷದ ಬಾಲಕ ಮತ್ತು ಆತನ 14 ವರ್ಷದ ಅಕ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರು ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸುರಿದ ಭಾರಿ ಮಳೆಯಿಂದಾಗಿ ಶಿಥಿಲಗೊಂಡಿದ್ದ ಗೋಡೆ ಕುಸಿದಿದೆ ಎಂದು ತಿಳಿದುಬಂದಿದೆ.
ಸಹಾರನ್ಪುರ ಜಿಲ್ಲೆಯ ಘಾಗ್ರೇಕಿ ಗ್ರಾಮದಲ್ಲಿ ಬುಧವಾರ ರಾತ್ರಿ ನಿರಂತರ ಮಳೆಗೆ ಮಣ್ಣಿನ ಮನೆ ಕುಸಿದು ಬಿದ್ದಿದ್ದು, 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪೋಲಿಸರು ಮತ್ತು ಸ್ಥಳೀಯರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಬೆಂಗಳೂರು, ಆಗಸ್ಟ್ 05: ಮ್ಯಾಟ್ರಿಮೋನಿ ವೆಬ್ಸೈಟ್ನಲ್ಲಿ ಪರಿಚಯವಾದ ಮಹಿಳೆಯೊಬ್ಬಳು ನಂಬಿಕೆ ಗಳಿಸಿ ನಕಲಿ ಕ್ರಿಪ್ಟೋಕರೆನ್ಸಿ ಟ್ರೇಡಿಂಗ್ ವೆಬ್ಸೈಟ್ಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ, ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಆಗಸ್ಟ್ 3ರಂದು ದಾಖಲಾಗಿರುವ ಎಫ್ಐಆರ್ ಪ್ರಕಾರ ಈ ವಂಚನೆ 2025ರ ಅಕ್ಟೋಬರ್ 27ರಂದು ಆರಂಭವಾಗಿದ್ದು, ನಿಹಾರಿಕಾ ಚೌಧರಿ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದ ಮಹಿಳೆ ಹಣ ಪೀಕಿರುವುದಾಗಿ ಆರೋಪಿಸಲಾಗಿದೆ. ಆಕೆ ತಾನು ಮೂಲತಃ ಆಂಧ್ರಪ್ರದೇಶದ ವಿಜಯವಾಡದವಳಾಗಿದ್ದು, ಪ್ರಸ್ತುತ ಯುನೈಟೆಡ್ ಕಿಂಗ್ಡಮ್ನಲ್ಲಿ ವಾಸವಿದ್ದೇನೆ. ಲಾಜಿಸ್ಟಿಕ್ಸ್ ಕಂಪನಿಯಲ್ಲಿ […]
ಕರ್ನಾಟಕದಲ್ಲಿ ಮುಂಗಾರು ಮಳೆ(Monsoon Rain) ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಲಾಗಿದೆ. ಇದೇ ವೇಳೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಎಚ್ಚರಿಕೆ ಸಂದೇಶದಲ್ಲೂ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ […]
ಮಧ್ಯಾಹ್ನ ಊಟ ಮಾಡಿದ ನಂತರ ಕಣ್ಣು ತೂಕಡಿಸುವಂತೆ, ಬಸ್ಸು, ಕಾರ್, ರೈಲಿನಲ್ಲಿ ಎಲ್ಲಿಗಾದರೂ ಪ್ರಯಾಣಿಸುವಾಗ (traveling) ಹೆಚ್ಚಿನವರಿಗೆ ನಿದ್ರೆ ಬಂದಂತಾಗುತ್ತದೆ. ಕೆಲವರಂತೂ ವಾಹನ ಹೊರಟ 10-15 ನಿಮಿಷದೊಳಗೆ ನಿದ್ರೆಗೆ ಜಾರಿ ಬಿಡುತ್ತಾರೆ. ನಿಮಗೂ ಕೂಡ ಇದೇ ರೀತಿ ಪ್ರಯಾಣಿಸುವಾಗ ನಿದ್ರೆ ಬರುತ್ತಾ? ಇದಕ್ಕೆ ಮುಖ್ಯ ಕಾರಣ ವಾಹನದ ಸೌಮ್ಯ ಕಂಪನ, ಎಂಜಿನ್ನ ನಿರಂತರ ಶಬ್ದ, ಆರಾಮದಾಯಕ ಆಸನ ಮತ್ತು ಮೆದುಳಿನ ಮೇಲೆ ಒತ್ತಡ ಬೀರದಿರುವುದು. ಈ ಎಲ್ಲಾ ಅಂಶಗಳು ದೇಹ ಮತ್ತು ಮನಸ್ಸನ್ನು ಶಾಂತಗೊಳಿಸುತ್ತವೆ, ಇದರಿಂದಾಗಿ ಹೆಚ್ಚಿನವರು […]