webnews kannada

World Loin Day 2026: ನೀವು ತಿಳಿದಿರದ ಸಿಂಹಗಳ ಕುರಿತಾದ ಆಸಕ್ತಿದಾಯಕ ಸಂಗತಿಗಳು

ಕಾಡಿನ ರಾಜ ಸಿಂಹ (lion) ತನ್ನ ಗತ್ತು ಗಾಂಭೀರ್ಯಕ್ಕೆ ಹೆಸರುವಾಸಿಯಾದ ಪ್ರಾಣಿ. ಅದೇ ರೀತಿ ಈ ಸಿಂಹಗಳ ಸಂತತಿ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿಯೂ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಒಂದು ಕಾಲದಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದ ಈ ಸಿಂಹಗಳು ಕ್ರಮೇಣ ವಿನಾಶದಂಚಿಗೆ ತಲುಪುತ್ತಿವೆ. ಆಧುನೀಕರಣ, ಅರಣ್ಯನಾಶ, ಆವಾಸಸ್ಥಾನದ ನಷ್ಟ, ಅಕ್ರಮ ಬೇಟೆ, ಹವಾಮಾನ ಬದಲಾವಣೆ ಇವೆಲ್ಲದರ ಕಾರಣದಿಂದ ಇಂದು ಕಾಡಿನ ರಾಜನ ಸಂತತಿ ಕ್ಷೀಣಿಸುತ್ತಿದೆ. ಈ ಗಂಭೀರತೆಯನ್ನು ಪರಿಗಣಿಸಿ, ಸಿಂಹಗಳು ಮತ್ತು ಅವುಗಳ ಆವಾಸಸ್ಥಾನವನ್ನು ರಕ್ಷಣೆ ಮಾಡುವ ಉದ್ದೇಶದಿಂದ ಪ್ರತಿವರ್ಷ ಆಗಸ್ಟ್‌ 10 ರಂದು ವಿಶ್ವ ಸಿಂಹ ದಿನವನ್ನು ಆಚರಿಸಲಾಗುತ್ತದೆ

ವಿಶ್ವ ಸಿಂಹ ದಿನದ ಆಚರಣೆ 2013 ರಲ್ಲಿ ಪ್ರಾರಂಭವಾಯಿತು. ಸಿಂಹಗಳ ಉಳಿವಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅವುಗಳ ರಕ್ಷಣೆಗಾಗಿ ಸಿಂಹ ಮತ್ತು ಹುಲಿಗಳ ರಕ್ಷಣೆಗಾಗಿ ಕೆಲಸ ಮಾಡುವ ಸಂಸ್ಥೆಯಾದ ಬಿಗ್‌ ಕ್ಯಾಟ್ಸ್‌ ರೆಸ್ಕ್ಯೂ ಸಂಸ್ಥೆಯ ಸಂಸ್ಥಾಪಕರಾದ ಡೆರೆಕ್‌ ಮತ್ತು ಬೆವರ್ಲಿ ಜೌಬರ್ಟ್‌ ಅವರು ನ್ಯಾಷನಲ್‌ ಜಿಯೋಗ್ರಾಫಿಕ್‌ ಸಹಭಾಗಿತ್ವದಲ್ಲಿ ಸಿಂಹ ದಿನದ ಆಚರಣೆಯನ್ನು ಪ್ರಾರಂಭಿಸಿದರು. ಕ್ಷೀಣಿಸುತ್ತಿರುವ ಸಿಂಹಗಳ ಸಂಖ್ಯೆ ಮತ್ತು ಅವುಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಆಚರಣೆಯ ಮುಖು ಉದ್ದೇಶವಾಗಿದೆ.

ಈ ಪ್ರಾಡಕ್ಟ್ ಅನ್ನು ನಿಮ್ಮದಾಗಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *