ಸಿನಿಮಾ

ನಟ ಚಿಕ್ಕಣ್ಣ ಮದುವೆ ಸಂಭ್ರಮ – ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದ ಭಾವಿ ಪತ್ನಿ ಪಾವನಾ

ಸ್ಯಾಂಡಲ್‌ವುಡ್‌ನ ಹಾಸ್ಯನಟ ಚಿಕ್ಕಣ್ಣ (Chikkanna Marriage) ಮದುವೆಗೆ ಕೌಂಟ್‌ಡೌನ್ ಶುರುವಾಗಿದೆ. ಇದೇ ಆಗಸ್ಟ್ 29ರಂದು ಆರತಕ್ಷತೆ ಹಾಗೂ ಆಗಸ್ಟ್ 30ರಂದು ಧಾರಾ ಮುಹೂರ್ತ ನಡೆಯಲಿದ್ದು, ಇಂದಿನಿದ್ದ ಮದುವೆ ಶಾಸ್ತ್ರಗಳೂ ಆರಂಭವಾಗಿವೆ.ಗುರುವಾರ ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದ ಪಾವನಾ ಅವರ ನಿವಾಸದಲ್ಲಿ ಅರಿಶಿಣ ಶಾಸ್ತ್ರ ನೆರವೇರಿದೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಶಾಸ್ತ್ರದಲ್ಲಿ ಪಾವನಾ ಹಳದಿ ಶಾಸ್ತ್ರದ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ಫ್ರೆಂಡ್ಸ್ ಕೂಡ ಈ ಖುಷಿಯ ಕ್ಷಣದಲ್ಲಿ ಭಾಗಿಯಾಗಿದ್ದಾರೆ.ಇತ್ತ ಚಿಕ್ಕಣ್ಣ ಅವರ ನಿವಾಸದಲ್ಲೂ ಅರಿಶಿಣ ಶಾಸ್ತ್ರ ನಡೆದಿದೆ. ವಧು-ವರರ ಮನೆಯಲ್ಲಿ ಪ್ರತ್ಯೇಕವಾಗಿ ಮದುವೆಯ ಶಾಸ್ತ್ರಗಳು ನಡೆಯುತ್ತಿದ್ದು, ಎರಡೂ ಕುಟುಂಬಗಳಲ್ಲಿ ಮದುವೆ ಸಂಭ್ರಮ ಜೋರಾಗಿದೆ

Leave a Reply

Your email address will not be published. Required fields are marked *