
ದಾವಣಗೆರೆ: ಇಲ್ಲಿನ (Davanagere) ಕಾಲೇಜೊಂದರ ಹಾಸ್ಟೆಲ್‌ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳ (Student) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ರಂಜಿತಾ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಕಳೆದ ಒಂದುವರೆ ವರ್ಷದಿಂದ ಇಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ
ಸೆ.2ರ ರಾತ್ರಿ ಹಾಸ್ಟೆಲ್‌ನ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪೋಷಕರು ಅಕಾಡೆಮಿ ವಿರುದ್ಧ ಹೊಡೆದು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಟೀಮ್ ಅಕಾಡೆಮಿ ವಿರುದ್ಧ ವಿದ್ಯಾ ನಗರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ಪೋಷಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ

