ಡಿಎನ್‌ಎ ಪರೀಕ್ಷೆಗೆ ಸೌಜನ್ಯ ತಾಯಿ ಕುಸುಮಾವತಿ ರಕ್ತದ ಮಾದರಿ ಪಡೆದ ಅಧಿಕಾರಿಗಳು-WebnewsKannada

ಬೆಳ್ತಂಗಡಿ: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ಆದೇಶಿಸಿದ ಬೆನ್ನಲ್ಲೇ, ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖಾ ಕಾರ್ಯವನ್ನು ಚುರುಕುಗೊಳಿಸಿದೆ. ಪ್ರಕರಣದ ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಭೇಟಿ ನೀಡಿದೆ.

ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ಆದೇಶಿಸಿದ ಬೆನ್ನಲ್ಲೇ, ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖಾ ಕಾರ್ಯವನ್ನು ಚುರುಕುಗೊಳಿಸಿದೆ. ಪ್ರಕರಣದ ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಭೇಟಿ ನೀಡಿದೆ.
​ತನಿಖಾಧಿಕಾರಿ ಲೋಕೇಶ್ ಪಿ. ಜಗಲಸರ್ ಹಾಗೂ ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದ ಮಂಗಳೂರು ಎಸ್‌ಐಟಿ ತಂಡವು, ಅಕ್ಟೋಬರ್ 23ರ ಶುಕ್ರವಾರ ಸಂಜೆ 4:30ರ ಸುಮಾರಿಗೆ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆಗಮಿಸಿತು. ತನಿಖೆಯ ನಿರ್ಣಾಯಕ ಭಾಗವಾಗಿ, ಮೃತ ಸೌಜನ್ಯಳ ತಾಯಿ ಕುಸುಮಾವತಿ ಅವರನ್ನು ನ್ಯಾಯಾಲಯಕ್ಕೆ ಕರೆತಂದ ಎಸ್‌ಐಟಿ ಅಧಿಕಾರಿಗಳು, ಡಿಎನ್‌ಎ ವಿಶ್ಲೇಷಣೆಗಾಗಿ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿದ್ದಾರೆ.
​ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯೆ ಡಾ. ಆಶಾ ಲತಾ ಅವರ ಉಸ್ತುವಾರಿಯಲ್ಲಿ ನ್ಯಾಯಾಲಯದ ಆವರಣದಲ್ಲೇ ಈ ವೈದ್ಯಕೀಯ ಪ್ರಕ್ರಿಯೆ ನೆರವೇರಿತು. ಸಂಪೂರ್ಣ ಪ್ರಕ್ರಿಯೆಯು ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಹಾಗೂ ಇಬ್ಬರು ಸರ್ಕಾರಿ ಸಾಕ್ಷಿಗಳ ಸಮ್ಮುಖದಲ್ಲಿ ಜರುಗಿತು.

Leave a Reply

Your email address will not be published. Required fields are marked *