
ಚಿಕ್ಕಮಗಳೂರಿನ ವ್ಯಕ್ತಿ ಫೇಸ್ಬುಕ್ ಜಾಹೀರಾತು ನಂಬಿ 1.28 ಕೋಟಿ ರೂ ಕಳೆದುಕೊಂಡ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬುವರಿಗೆ ಖದೀಮರು ಆನ್ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಹೆಸರಲ್ಲಿ ಕೋಟ್ಯಂತರ ರೂ ಹಣ ವಂಚಿಸಿದ್ದಾರೆ. ‘FYERS’ ಎಂಬ ಟ್ರೇಡಿಂಗ್ ಜಾಹೀರಾತನ್ನು ಫೇಸ್ಬುಕ್ನಲ್ಲಿ ನೋಡಿದ ಕಲ್ಲೇಗೌಡರು F8-FYERS ಸೆಕ್ಯೂರಿಟೀಸ್ ವಾಟ್ಸಾಪ್ ಗ್ರೂಪ್ ಸೇರಿದ್ದಾರೆ
ಆನ್ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಹೆಸರಲ್ಲಿ ಕಲ್ಲೇಗೌಡಗೆ ವಂಚಕರು ಹೆಚ್ಚಿನ ಲಾಭ ಗಳಿಸುವ ಆಸೆ ತೋರಿಸಿದ್ದಾರೆ. ಹಂತ ಹಂತವಾಗಿ 1 ಕೋಟಿ 28 ಲಕ್ಷದ 10 ಸಾವಿರ ರೂ. ಪಡೆದುಕೊಂಡಿದ್ದಾರೆ. ಆದರೆ ಯಾವುದೇ ರೀತಿಯ ಲಾಭಾಂಶ ನೀಡಿಲ್ಲ. ಹೀಗಾಗಿ ಕಲ್ಲೇಗೌಡರು ಹಣ ವಿತ್ಡ್ರಾ ಮಾಡಲು ಹೋದಾಗ ವಂಚನೆಗೊಳಗಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಕಲ್ಲೇಗೌಡರಿಂದ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ
