ಉಜಿರೆ, ಜುಲೈ 05: ಆಸರೆ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘ (ರಿ) ಉಜಿರೆ ಇವರ ವತಿಯಿಂದ ರುಡ್ಸೆಟ್ ಸಂಸ್ಥೆ, ಉಜಿರೆಯಲ್ಲಿ ಇಂದು ನಡೆದ “ಆಟಿಕೂಟ” ಕಾರ್ಯಕ್ರಮವು ಆಟಿ ತಿಂಗಳ ಸಾಂಪ್ರದಾಯಿಕ ತಿನಿಸುಗಳು ಹಾಗೂ ನಾಟಿ ವೈದ್ಯ ರಿಗೆ ಸನ್ಮಾನ ಜರುಗಿತು.
ಕಾರ್ಯಕ್ರಮದಲ್ಲಿ ಹಿರಿಯ ನಾಟಿ ವೈದ್ಯ ರಾದ * ಶ್ರೀನಿವಾಸ ಪೂಜಾರಿ* ಪೆರ್ಮುದೆ,ಕೊಯ್ಯೂರು ಅವರು ಭಾಗವಹಿಸಿ, ಆಟಿ ತಿಂಗಳ ತಿನಿಸುಗಳು ಮತ್ತು ನಾಟಿ ಜೀವನದ ಮಹತ್ವದ ಕುರಿತು ಮಾತನಾಡಿದರು. ಆಟಿ ತಿಂಗಳಲ್ಲಿ ಆರೋಗ್ಯಕರ ಆಹಾರ ಸೇವನೆಯ ಮಹತ್ವವನ್ನು ವಿವರಿಸಿದ ಅವರು, ಪೌಷ್ಟಿಕಾಂಶಯುಕ್ತ ಸಾಂಪ್ರದಾಯಿಕ ಆಹಾರಗಳು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಆಸರೆ ಸದಸ್ಯರು ತಯಾರಿಸಿ ತಂದ ವಿವಿಧ ಬಗೆಯ ಆಟಿ ತಿಂಗಳ ವಿಶೇಷ ತಿನಿಸುಗಳನ್ನು ಸವಿದು ಸಂಭ್ರಮಿಸಿದರು. ಆಟಿ ತಿಂಗಳ ಆಚರಣೆಗಳ ಹಿಂದಿರುವ ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕುರಿತು ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಯಿತು.
ಸಂಸ್ಥೆಯ ಹಿರಿಯ ಉಪನ್ಯಾಸಕರಾದ *ಅಬ್ರಹಾಂ ಜೇಮ್ಸ್*, *ಕೆ. ಕರುಣಾಕರ ಜೈನ್* *ಶ್ರೀಮತಿ ಅನಸೂಯಾ ರೈ* ಹಾಗೂ *ಸುರೇಶ್ ಗೌಡ* ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಸರೆ ಸಂಘದ ಅಧ್ಯಕ್ಷರಾದ *ಪ್ರಶಾಂತ್ ಕುದ್ಯಾಡಿ* ಸ್ಬಾಗತಿಸಿ, ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮ ವನ್ನು *ಗೌತಮ್ ಕುಕ್ಕಾನ್* ನಿರ್ವಹಿಸಿದರು.
Copyright - 2022webnewskannada news wedsite. All rights reserved.
ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ
gmail-karavalivaninews@gmail.com
(www.webnewskannada.com): ಅನ್ನಭಾಗ್ಯ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ ಈ ಕುರಿತು ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಅನ್ನಭಾಗ್ಯ ಯೋಜನೆ ಪರಿಷ್ಕರಣೆ ಮಾಡಬೇಕಾಗಿದೆ. ಸುಮಾರು 13 ಲಕ್ಷ ಅನರ್ಹರಿದ್ದಾರೆ ಅವರನ್ನ ತೆಗೆಯಬೇಕಿದೆ . ಬಡವರಿಗೆ ಅನ್ಯಭಾಗ್ಯ ನೀಡಬೇಕು. ಅನರ್ಹರು ಎಪಿಎಲ್ ಗೆ ಹೋಗಬೇಕು. ನಾನು ಈ ಹಿಂದೆಯೇ ಪ್ರಯತ್ನ ಮಾಡಿದ್ದೆ. ಆಗ ಗೊಂದಲ ಆಗಿತ್ತು. ಮನವಿ ಮಾಡುತ್ತಿದ್ದೇನೆ ಬಡವರಿಗೆ ಅವಕಾಶ ಮಾಡಿಕೊಡಿ ಎಂದರು. ಸಚಿವ ಸಂಫುಟ ಉಪಸಮಿತಿ ಸಭೆ ಏಕೆ ಕರದಿದ್ದಾರೆ […]
ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳ ಉಪಟಳ ಮಿತಿ ಮೀರಿದ್ದು, ಕಾಡಂಚಿನ ಗ್ರಾಮಗಳ ಜನರ ಬದುಕೇ ದುಸ್ತರವಾಗಿ ಮಾರ್ಪಟ್ಟಿದೆ. ಜನವಸತಿ ಪ್ರದೇಶಗಳಿಗೆ ಮೇಲಿಂದ ಮೇಲೆ ವನ್ಯ ಜೀವಿಗಳು ಲಗ್ಗೆ ಇಡುತ್ತಿರವ ಕಾರಣಕ್ಕೆ ಜೀವ ಭಯದಲ್ಲಿಯೇ ಜನ ಬದುಕುವಂತಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದ ಆನೆಹೊಲ ಹಾಡಿಯಲ್ಲಿ ಏಕಾಏಕಿ ಚಿರತೆ ದಾಳಿ ನಡೆಸಿದ್ದು, ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಪವಾಡ ಎಂಬಂತೆ ಜೀವ ಉಳಿಸಿಕೊಂಡಿದ್ದಾಳೆ. ಕಳೆದ 6 ತಿಂಗಳಿಂದ ಮಲೆ ಮಹದೇಶ್ವರ ಬೆಟ್ಟದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಚಿರತೆ ದಾಳಿ […]
IPL ಬ್ರಾಡ್ಕಾಸ್ಟ್ ಇಂಜಿನಿಯರ್ ನಿಧನ ENGಗೆ ಸೇರಿದ IPL ಬ್ರಾಡ್ಕಾಸ್ಟ್ ಇಂಜಿನಿಯರ್ ಜಾನ್ ವಿಲಿಯಂ (76) ನಿಧನರಾಗಿದ್ದಾರೆ. ಇದೆ ತಿಂಗಳ 29ರಂದು MI-KKR ಪಂದ್ಯ ನಂತರ ಅವರು ಹೋಟೆಲ್ಗೆ ತೆರಳಿದ್ದರು. ಮರುದಿನ ಕಾಲ್ ಮಾಡಿದರೂ ಪ್ರತಿಕ್ರಿಯೆ ಇಲ್ಲದ ಕಾರಣ, ಮಾಸ್ಟರ್ ಕೀ ಬಳಸಿ ಬಾಗಿಲು ತೆರೆದಾಗ ಜಾನ್ ನೆಲದ ಮೇಲೆ ಬೈದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವರು ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಪೋಸ್ಟ್ಮಾರ್ಟಂ ವರದಿಯಲ್ಲಿ ಯಾವುದೇ ಅನುಮಾನಾಸ್ಪದ ಕಂಡುಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.