webnews kannada

ಅಸ್ತಮಾ ಸಮಸ್ಯೆ: ನಿರಂತರ ಕೆಮ್ಮುತ್ತಿದ್ದ ವ್ಯಕ್ತಿ ಮೇಲೆ ನೆರೆಮನೆಯವರ ಹಲ್ಲೆ, ಸಾವು

ಬೆಂಗಳೂರು: ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಜೋರಾಗಿ ಕೆಮ್ಮಿದ್ದಕ್ಕೆ ನೆರೆಮನೆಯವರು ಜಗಳಕ್ಕಿಳಿದು ಹಲ್ಲೆ ನಡೆಸಿದ್ದು, ಪರಿಣಾಮ ಉಸಿರಾಟ ಸಮಸ್ಯೆಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆಯೊಂದು ಬೆಂಗಳೂರಿನ ಹೊರವಲಯದ ಬಿಡದಿ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ವಿನೋದ್ ಕುಮಾರ್ ಶೈನೀ (34) ಎಂದು ಗುರುತಿಸಲಾಗಿದೆ. ಇವರು ರಾಜಸ್ಥಾನ ಮೂಲದವರಾಗಿದ್ದು, ಬಿಡದಿ ತಾಲೂಕಿನ ಕೆತಗಾನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಖಾಸಗಿ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು.

ಫೆಬ್ರವರಿ 7ರಂದು ಸಂಜೆ ವಿನೋದ್ ಕುಮಾರ್ ಜೋರಾಗಿ ಕೆಮ್ಮುತ್ತಿದ್ದಾಗ ನೆರೆಹೊರೆಯವರು ಜಗಳಕ್ಕೆ ಇಳಿದಿದ್ದಾರೆ. ಮಾತಿನ ಚಕಮಕಿ ವಾಗ್ವಾದವಾಗಿ ತಿರುಗಿ, ಆತನನ್ನು ತಳ್ಳಿಹಾಕಿ ಹಲ್ಲೆ ನಡೆಸಲಾಗಿದೆ. ಈ ವೇಳೆ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತೀವ್ರ ಉಸಿರಾಟ ಸಮಸ್ಯೆ ಎದುರಾಗಿದೆ.

ಕೂಡಲೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷಾ ವರದಿ ಬಂದ ನಂತರವೇ ತಿಳಿಯಲಿದೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) ಅಡಿಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *