webnews kannada

ಬೆಂಗಳೂರು-ಮುಂಬೈ ಮಾರ್ಗಕ್ಕೆ ವಂದೇ ಭಾರತ್ ಸ್ಲೀಪರ್ ಸಿದ್ಧ

ಬೆಂಗಳೂರು-ಮುಂಬೈ ನಡುವೆ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು (Bengaluru-Mumbai Vande Bharat Sleeper) ಸಂಚಾರಕ್ಕೆ ಸಿದ್ಧತೆ ಅಂತಿಮ ಹಂತ ತಲುಪಿದೆ. ನೈಋತ್ಯ ರೈಲ್ವೆ (SWR) ಎರಡು 16 ಬೋಗಿಗಳ ವಂದೇ ಭಾರತ್ ಸ್ಲೀಪರ್ ರೈಲು ಸೆಟ್‌ಗಳನ್ನು ಸ್ವೀಕರಿಸಿ ಅಧಿಕೃತವಾಗಿ ನಿಯೋಜನೆ ಮಾಡಿದೆ. ಶೀಘ್ರದಲ್ಲೇ ಟ್ರಯಲ್ ರನ್ (ಪ್ರಾಯೋಗಿಕ ಸಂಚಾರ) ನಡೆಸಿ, ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ

.ಬೆಂಗಳೂರಿನಲ್ಲೇ ಬಿಇಎಂಎಲ್ (BEML) ತಯಾರಿಸಿದ ಈ ಎರಡು ರೈಲು ಸೆಟ್‌ಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF) ನೇತೃತ್ವದ ಯೋಜನೆಯಡಿ ನಿರ್ಮಿಸಲಾಗಿದೆ. ವಿವಿಧ ಹಂತದ ಪರೀಕ್ಷೆ ಹಾಗೂ ಪರಿಶೀಲನೆಗಳ ಬಳಿಕ ರೈಲುಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಬೆಂಗಳೂರು ವಿಭಾಗದ ಡಿವಿಷನಲ್ ರೈಲ್ವೆ ಮ್ಯಾನೇಜರ್ ಆಶುತೋಷ್ ಕುಮಾರ್ ಸಿಂಗ್ ಅವರು ರೈಲು ಸೆಟ್‌ಗಳು ಕಮಿಷನ್ ಆಗಿರುವುದನ್ನು ಖಚಿತಪಡಿಸಿದ್ದಾರೆ. ರೈಲು ಸೇವೆ ಆರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ

ವಂದೇ ಭಾರತ್ ಸ್ಲೀಪರ್ ರೈಲು ರಾತ್ರಿ ಬೆಂಗಳೂರಿನಿಂದ ಹಾಗೂ ಮುಂಬೈನಿಂದ ಹೊರಡಲಿದೆ. ಎರಡೂ ನಗರಗಳ ನಡುವಿನ ಪ್ರಯಾಣದ ಅವಧಿ ಸುಮಾರು 16 ಗಂಟೆ ಆಗಿರಲಿದೆ. ವಿಮಾನ ಪ್ರಯಾಣಕ್ಕಿಂತ ಕಡಿಮೆ ದರದಲ್ಲಿ ಸೇವೆ ಲಭ್ಯವಾಗುವ ನಿರೀಕ್ಷೆಯಿದೆ.

ರೈಲು ಸಂಚಾರವನ್ನು KSR ಬೆಂಗಳೂರು-ಮುಂಬೈ CSMT ಮಾರ್ಗದಲ್ಲಿ ಆರಂಭಿಸುವ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯುತ್ತಿದೆ. ಇದೇ ವೇಳೆ, SMVT ಬೆಂಗಳೂರು ನಿಲ್ದಾಣದಿಂದ ಸೇವೆ ಆರಂಭಿಸುವ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಎರಡೂ ಆಯ್ಕೆಗಳನ್ನು ಪರಿಗಣಿಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *