ಸತತ ಎರಡನೇ ಬಾರಿ ಜಿಲ್ಲಾ ಮಟ್ಟದ ‘ಕಥೆ ಹೇಳುವ’ ಸ್ಪರ್ಧೆಯಲ್ಲಿ ಪ್ರಣೀತಾ ಪ್ರಥಮ
ಹುಲಿ

ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2025-26’ ರ ಕಥೆ ಹೇಳುವ ಸ್ಪರ್ಧೆಯಲ್ಲಿ ಕುಮಾರಿ ಪ್ರಣೀತಾ ಪ್ರಥಮ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ.
ಸೈಬ್ರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಪ್ರಣೀತಾ, ಪ್ರಾಥಮಿಕ ಶಾಲಾ ವಿಭಾಗದ (5-7ನೇ ತರಗತಿ) ಕಥೆ ಹೇಳುವ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ವಿಶೇಷವೆಂದರೆ, ಪ್ರಣೀತಾ ಅವರು ಈ ಸ್ಪರ್ಧೆಯಲ್ಲಿ ಸತತ ಎರಡನೇ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆಯುವ ಮೂಲಕ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ.
ವಿದ್ಯಾರ್ಥಿನಿಯ ಈ ವಿಶೇಷ ಸಾಧನೆಗೆ ಶಾಲೆಯ ಶಿಕ್ಷಕ ವೃಂದ, ಪೋಷಕರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿ, ರಾಜ್ಯ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.