ರೋಡಲ್ಲೇ ಬಟ್ಟೆ ಬಿಚ್ಚಿ ಹೊಡಿತೀನಿ ಎಂದ ಮಾಲೀಕ; ಆರೋಪಿ ಸೈಯದ್ ಪೊಲೀಸರ ವಶಕ್ಕೆ!
ಬೆಂಗಳೂರು: ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ಸೈಬರ್ ಸೆಂಟರ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಸೈಯದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್ ಸೆಂಟರ್ ಮಾಲೀಕ ಸೈಯದ್ ಸಾರ್ವಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಐದು ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದರೂ, ಕೆಲಸಕ್ಕೆ ರಜೆ ಹಾಕಿದ ವಿಷಯಕ್ಕೆ ಸಂಬಂಧಿಸಿದಂತೆ…
