webnews kannada

ಬ್ರಹ್ಮಾವರದಲ್ಲೊಂದು ಅಮಾನವೀಯ ಘಟನೆ

9ನೇ ತರಗತಿ ಬಾಲಕನ ಅಪಹರಿಸಿ ಹಲ್ಲೆ, ಇಬ್ಬರು ಅರೆಸ್ಟ್!

 

ತಾರೇಶ್‌(38), ತಂದೆ:  ನರಸಿಂಹ, ಮಟಪಾಡಿ    ಇವರ ಮಗನಾದ ಅಪ್ರಾಪ್ತ ವಯಸ್ಸಿನ ತಿಲಕ ಎಂಬುವನು ಬ್ರಹ್ಮಾವರ ಸರ್ಕಾರಿ ಬೋರ್ಡ್‌ ಹೈಸ್ಕೂಲ್‌ನಲ್ಲಿ 9ನೇ ತರಗತಿ ಕಲಿಯುತ್ತಿದ್ದು, ದಿನಾಂಕ 01/06/2026 ರಂದು ಬೆಳಿಗ್ಗೆ 08:30 ಗಂಟೆಗೆ ಆರೋಪಿತರು  ಮಗನನ್ನು ಬ್ರಹ್ಮಾವರ ಬಸ್‌ ನಿಲ್ದಾಣದಿಂದ ಅಪಹರಿಸಿಕೊಂಡು ಕೇರಳ ರಾಜ್ಯದ ತಲಪಾಡಿ ಕುಂಜತ್ತೂರು ಪದವು ಎಂಬಲ್ಲಿರುವ ವುಡ್‌ ಕಂಪೆನಿಗೆ ಬಲತ್ಕಾರದಿಂದ ಕರೆದುಕೊಂಡು ಹೋಗಿ ಕೆಲಸಕ್ಕೆ ಸೇರಿಸಿದ್ದು,  ಈ ಬಗ್ಗೆ ಅಪ್ರಾಪ್ತ ಬಾಲಕನು ಮನೆಗೆ ಹೋಗುತ್ತೇನೆಂದು ಹೇಳಿದರೂ ಕೂಡ ಆತನಿಗೆ ದಿನಾಂಕ 09/06/2026 ರಂದು ಅವರು ವಾಸವಿದ್ದ ಕೋಣೆಯಲ್ಲಿ ಮದ್ಯಾಹ್ನ 1:30 ಗಂಟೆಗೆ ಆರೋಪಿತರಾದ ಸುಚಿತ್‌ನು ವಯರ್‌ನಿಂದ ಹಲ್ಲೆ ಮಾಡಿ ವಿಖ್ಯಾತನು ಆತನ ಕೈಯಲ್ಲಿದ್ದ ಚೂರಿಯನ್ನು ತೋರಿಸಿ ಈ ವಿಚಾರ ಯಾರಿಗಾದರೂ ಹೇಳಿದರೆ ನಿನ್ನನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ  ಹಾಕಿ, ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದು, ಈ ಕೃತ್ಯವನ್ನು ಅಲ್ಲೇ ಇದ್ದ ವ್ಯಕ್ತಿ ಒಬ್ಬ ಮೊಬೈಲ್‌ನಲ್ಲಿ ವೀಡಿಯೊ ಮಾಡಿರುವುದಾಗಿದೆ.

ಈ ಬಗ್ಗೆ  ಬ್ರಹ್ಮಾವರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ : 117/2026 U/s. 137(2),115(2), 352,351(3) R/W 3(5) BNS and 75 JJ ACT and 3(1)(r), 3(1)(s), 3(2)(v-a) SC/ST (POA) 1989 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಈ ಪ್ರಕರಣದ ಆರೋಪಿಗಳಾದ 1) ವಿಖ್ಯಾತ್‌ ಆಚಾರ್ಯ(19), ಮತ್ತು 2) ಸುಚಿತ್‌ ನಾಯಕ್‌(20), ಯವರನ್ನು ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.  ಮೂರನೇ ಅಪರಾದಿ ಬಾಲಾಪರಾಧಿಯಾಗಿದ್ದು ಭಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಲಾಗಿದೆ.

ಅಮೆಜಾನ್ ನಲ್ಲಿ ಸ್ಮಾರ್ಟ್ ವಾಚ್ ನಿಮಗಾಗಿ

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *