ದೇಶ

ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ: ಪ್ರಮುಖ ಆರೋಪಿ ಅಫ್ರಿದ್ ಬಂಧನ!

ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ್ ಪರ ಹಾಡು ಹಾಕಿ ಸಾಮಾಜಿಕ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ, 23 ವರ್ಷದ ಅಫ್ರಿದ್ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ

.ಬಂಧಿತ ಆರೋಪಿ ಅಫ್ರಿದ್ ಖಾಸಗಿ ಕಾರು ಶೋರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದು, ಅದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಫ್ರಿದ್ ಹಾಗೂ ಮತ್ತೊಬ್ಬ ಆರೋಪಿ ರೋಷನ್‌ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ (Suo Moto) ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಕೇವಲ ವಿಡಿಯೋ ಕ್ರಿಯೇಟ್ ಮಾಡಿದವರು ಮಾತ್ರವಲ್ಲದೆ, ಈ ದೇಶದ್ರೋಹಿ ವಿಡಿಯೋವನ್ನು ಶೇರ್ ಮಾಡಿದವರು ಮತ್ತು ವಾಟ್ಸಾಪ್, ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೇಟಸ್ ಹಾಕಿಕೊಂಡವರ ಮೇಲೆಯೂ ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *