
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ & ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದ ಆರೋಪಿಗಳಾದ ಪ್ರಶಾಂತ್ ತಲ್ವಾರ್, ಚಂದ್ರಶೇಖರ್ & ನಿಂಗರಾಜ್ ಗುಲಾಪ್ಪ ತಲ್ವಾರ್ ಎಂಬವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕೋರ್ಟ್ ತಿರಸ್ಕರಿಸಿದೆ. ಇದಕ್ಕೂ ಮೊದಲು ಸೆಷನ್ಸ್ ಕೋರ್ಟ್ ಕೂಡ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು




