webnews kannada

ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆ ಇವರ ಆಶ್ರಯದಲ್ಲಿ ನಡೆದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಹಾಗೂ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರರಾದ ಶ್ರಿಯುತ ಲಕ್ಷ್ಮೀ ನಾರಾಯಣ ರಾವ್ ಅವರು ಮಾತನಾಡಿ, ವೃತ್ತಿಯಲ್ಲಿ ಶಿಸ್ತು, ಸೇವಾಭಾವ ಹಾಗೂ ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಅನುಭವ ಗಳಿಸಬೇಕು ಎಂದು ಸಲಹೆ ನೀಡಿದರು. ಪೂಜ್ಯ ಖಾವಂದ ಪರಿಕಲ್ಪನೆಯ ರುಡ್ ಸೆಟ್ ಸಂಸ್ಥೆ ಕೇವಲ ತಾಂತ್ರಿಕ ತರಬೇತಿಗೆ ಸೀಮಿತವಾಗದೇ, ಜೀವನ ಕೌಶಲ್ಯಗಳನ್ನು ಕಲಿಸುವ ಅತ್ಯಂತ ಮಹತ್ವದ ಸಂಸ್ಥೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಬಿ.ಪಿ. ವಿಜಯಕುಮಾರ್ ವಹಿಸಿ ಮಾತನಾಡಿ, ತರಬೇತಿ ಪಡೆದವರು ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವ ಉದ್ಯೋಗ ಆರಂಭಿಸುವಂತೆ ಕರೆ ನೀಡಿದರು.

ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಅಜೇಯ ಅವರು ಸ್ವಾಗತ ಭಾಷಣ ಮಾಡಿದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಣೆ ನಡೆಸಿದರು. ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ವಂದನಾರ್ಪಣ

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *