webnews kannada

ರುಡ್‌ಸೆಟ್ ಉಜಿರೆಯಲ್ಲಿ FLC-CRP ತರಬೇತಿ ಸಮಾರೋಪ

ಉಜಿರೆ : ಗ್ರಾಮೀಣ ಸಮುದಾಯಗಳಿಗೆ ಆರ್ಥಿಕ ಸಾಕ್ಷರತೆ ಹಾಗೂ ಬ್ಯಾಂಕಿಂಗ್ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳು (FLC-CRP) ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ (NRLM) ವಿಭಾಗದ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ *ಶ್ರೀ ಹರಿಪ್ರಸಾದ್* ಅವರು ಹೇಳಿದರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾದ ಹಣಕಾಸು ಸಾಕ್ಷರತಾ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (FLC-CRP) ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ತರಬೇತಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ *ಶ್ರೀ ಸುನೀಲ್ ನಾಯಕ್* ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ ವಿಭಾಗದ ಜಿಲ್ಲಾ ವ್ಯವಸ್ಥಾಪಕರಾದ *ಶ್ರೀಮತಿ ಶಕುಂತಲಾ* ತರಬೇತಿದಾರರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಕೆಲವು ಶಿಬಿರಾರ್ಥಿಗಳು ತಮ್ಮ ಕಲಿಕೆಯ ಅನುಭವಗಳನ್ನು ಹಂಚಿಕೊಂಡು, ಗುಣಮಟ್ಟದ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ರುಡ್‌ಸೆಟ್ ಸಂಸ್ಥೆ ಹಾಗೂ ಎನ್‌ಆರ್‌ಎಲ್‌ಎಂ ಇಲಾಖೆಗೆ ಕೃತಜ್ಞತೆ ಸಲ್ಲಿಸಿದರು.

ಸಂಸ್ಥೆಯ ಹಿರಿಯ ಉಪನ್ಯಾಸಕರಾದ *ಶ್ರೀ ಕರುಣಾಕರ್ ಕೆ. ಜೈನ್* ಅವರು ಕಾರ್ಯಕ್ರಮ ನಿರೂಪಿಸಿ,ಸಿದರು. ಸುಳ್ಯ ತಾಲೂಕು ಪಂಚಾಯತ್‌ನ ಎನ್‌ಆರ್‌ಎಲ್‌ಎಂ ತಾಲೂಕು ಯೋಜನಾ ವ್ಯವಸ್ಥಾಪಕರಾದ *ಶ್ರೀಮತಿ ಶ್ವೇತಾ* ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *