ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಆತ್ಮಹತ್ಯೆ: ಡೆತ್‌ನೋಟ್‌ ಪತ್ತೆ!

ದೆಹಲಿ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಮೆಹ್ರಾ ಅವರು ನೋಯ್ದಾದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸೆಕ್ಟ‌ರ್ 82ರ ವಸತಿ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ಫೇಸ್-2 ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ ಎನ್ನಲಾಗಿದ್ದು, ಅದರ ಸತ್ಯಾಸತ್ಯತೆ&ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *