ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ.
2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.
ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಈ ಕೆಳಗಿನ ದಾಖಲೆಗಳನ್ನು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ವಿನಂತಿಸಿದೆ. ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ.
ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ.
ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ
Copyright - 2022webnewskannada news wedsite. All rights reserved.
ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ
gmail-karavalivaninews@gmail.com
ಸುಂದರವಾದ ಸ್ಮಾರ್ಟ್ ವಾಚ್ ನಿಮ್ಮದಾಗಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲದ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆ ಗೊಳಿಸಲಾಗಿದೆ. ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್” ಕಾರ್ಯಕ್ರಮದಲ್ಲಿ […]
ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವವರಿಗೆ OC ಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ & ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಂಡವರಿಗೆ ಮಾತ್ರ ಅನ್ವಯಿಸುವಂತೆ ಒಸಿ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ ನೀಡಿ ಇಂಧನ ಇಲಾಖೆ ಆದೇಶಿಸಿದೆ. 15 ದಿನದೊಳಗೆ ಅರ್ಹರು ಅರ್ಜಿ ಸಲ್ಲಿಸಬಹುದು.
○ ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಸ್ನೇಹ ಭಾವ ಹಾಗೂ ಐಕ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯರವರು, ವಹಿಸಿದ್ದರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯರವರು ವಿದ್ಯಾರ್ಥಿಗಳನ್ನು ಕುರಿತು “ಇಫ್ತಾರ್ ಕೂಟವೂ ಸಹೋದರತ್ವ, ಪ್ರೀತಿ, ಮತ್ತು ಐಕ್ಯತೆಯ ಸಂಕೇತವಾಗಿದೆ. ಈ ಕಾರ್ಯಕ್ರಮದ ಮೂಲಕ ನಾವು ಪರಸ್ಪರ ಗೌರವ, ಸ್ನೇಹ, ಮತ್ತು ಸಾಮರಸ್ಯವನ್ನು ಬೆಳೆಸಿಕೊಳ್ಳಬಹುದು ಎ0ದರು.ಹಾಗೂ ಇಫ್ತಾರ್ ಕೂಟ […]