
ಅಡುಗೆ ಮನೆಗೆ ಬೇಕಾಗುವ ವಸ್ತುಗಳು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ – ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. ಈ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದೆ.
2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.

ಯಾವೆಲ್ಲಾ ದಾಖಲೆ ನೀಡಬೇಕು?
ಎಸ್ಕಾಂ ಸಿಬ್ಬಂದಿ ಮನೆಗೆ ಭೇಟಿ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ಸೇರಿ ಎಲ್ಲಾ ಎಸ್ಕಾಗಳು ವಿನಂತಿ ಮಾಡಿವೆ.
ಆಧಾರ್ ಕಾರ್ಡ್
ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಫೋಟೋ
ಮತದಾರರ ಗುರುತಿನ ಚೀಟಿ (ವೋಟರ್ ಐಡಿ)
ಪಾನ್ ಕಾರ್ಡ್
ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ)
ರೇಷನ್ ಕಾರ್ಡ್
ಜಾತಿ ಪ್ರಮಾಣ ಪತ್ರ
ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ.




