webnews kannada

ರೋಡಲ್ಲೇ ಬಟ್ಟೆ ಬಿಚ್ಚಿ ಹೊಡಿತೀನಿ ಎಂದ ಮಾಲೀಕ; ಆರೋಪಿ ಸೈಯದ್ ಪೊಲೀಸರ ವಶಕ್ಕೆ!

ಬೆಂಗಳೂರು: ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ಸೈಬರ್ ಸೆಂಟರ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಸೈಯದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೆಂಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್ ಸೆಂಟರ್ ಮಾಲೀಕ ಸೈಯದ್ ಸಾರ್ವಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಐದು ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದರೂ, ಕೆಲಸಕ್ಕೆ ರಜೆ ಹಾಕಿದ ವಿಷಯಕ್ಕೆ ಸಂಬಂಧಿಸಿದಂತೆ ಸೈಬರ್ ಸೆಂಟರ್ ಮಾಲೀಕನೋರ್ವ ಯುವತಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ರಾಜಧಾನಿಯ ಕೆಂಗೇರಿಯಲ್ಲಿ ನಡೆದಿದೆ. ಯುವತಿಯ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಮುಸ್ಕಾನ್ ಟೈಮ್ಸ್ ಸೈಬರ್ ಸೆಂಟರ್ ಮಾಲೀಕ ಸೈಯದ್‌ನನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂಲಗಳ ಪ್ರಕಾರ ಕಳೆದ ಐದು ವರ್ಷಗಳಿಂದ ಲಕ್ಷ್ಮಿ ಎಂಬ ಯುವತಿ ಕೆಂಗೇರಿಯಲ್ಲಿರುವ ಸೈಯದ್ ಎಂಬುವವರಿಗೆ ಸೇರಿದ ‘ಮುಸ್ಕಾನ್ ಟೈಮ್ಸ್’ ಸೈಬರ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ವೈಯಕ್ತಿಕ ಕಾರಣಗಳಿಂದಾಗಿ ಲಕ್ಷ್ಮಿ ಅವರು ಕಳೆದ ಕೆಲವು ದಿನಗಳಿಂದ ಕೆಲಸಕ್ಕೆ ಗೈರಾಗಿದ್ದರು. ಇದರಿಂದ ತೀವ್ರವಾಗಿ ಕೆರಳಿದ್ದ ಮಾಲೀಕ ಸೈಯದ್, ಯುವತಿಯ ವಿರುದ್ಧಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ. ಅಲ್ಲದೆ ಆಕೆಯ ವಿರುದ್ಧ ದ್ವೇಷ ಸಾಧಿಸಲು ಶುರು ಮಾಡಿದ್ದ ಎನ್ನಲಾಗಿದೆ.

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *