webnews kannada

ಪಂಚವರ್ಣದ ಆಸಾಡಿ ಒಡ್ರ್  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಜ್ಯೋತಿ ಸಾಲಿಗ್ರಾಮ ಆಯ್ಕೆ

 ಸುಂದರವಾದ ಸ್ಮಾರ್ಟ್ ವಾಚ್ ನಿಮ್ಮದಾಗಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಕೋಟ:  ಕೋಟ ಪಂಚವರ್ಣ ಮಹಿಳಾ ಮಂಡಲದ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ   ಜ್ಯೋತಿ ಸಾಲಿಗ್ರಾಮ  ಆಯ್ಕೆ ಗೊಳಿಸಲಾಗಿದೆ.

   ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ  ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್” ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು.

 ವಿಶೇಷ ಆಹ್ವಾನಿತರಾಗಿ   ಕುಂದಗನ್ನಡ ರಾಯಬಾರಿ ಮನು ಹಂದಾಡಿ(ಮನೋಹರ್ ಶೆಟ್ಟಿ)  ಭಾಗವಹಿಸಲಿದ್ದಾರೆ.

 ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ ಸ್ನೇಹಕೂಟ ಮಣೂರು  ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.

 ಸ್ನೇಹಕೂಟ ಮಣೂರು  ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿ ಕಡಿಮೆ ಬೆಲೆಗೆ ಉತ್ತಮವಾದ ಸ್ಮಾರ್ಟ್ ವಾಚ್ ಇಂದು ನಿಮ್ಮದಾಗಿಸಿಕೊಳ್ಳಿ

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *