
ದಕ್ಷಿಣ ಭಾರತದಲ್ಲಿ ನೈರುತ್ಯ ಮುಂಗಾರು ಮಾರುತಗಳು ತೀವ್ರಗೊಂಡಿವೆ. ಪರಿಣಾಮ, ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೆ ಮಳೆ ಅಬ್ಬರ ಮುಂದುವರೆಯಲಿದೆ ಎಂದು ತಿಳಿಸಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ರಾಮನಗರ, ವಿಜಯನಗರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಅದೇ ರೀತಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ವಿವರಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿದಂತೆ ಸೂಚಿಸಲಾಗಿದೆ


