ಸೆಪ್ಟೆಂಬರ್ 26: ಪಾಂಡೇಶ್ವರ ಗ್ರಾಮ ಪಂಚಾಯತ್‌ನಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ-webnews kannada

ಸಾಂದರ್ಭಿಕ ಚಿತ್ರ


ಕೋಟ: ರಾಜ್ಯ ಸರ್ಕಾರದ ಹೊಸ ಯೋಜನೆಯಾದ ಹೋಬಳಿ ಮಟ್ಟದ ಹಾಗೂ ಗ್ರಾಮ ಪಂಚಾಯತ್ ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಯು ಸೆಪ್ಟೆಂಬರ್ 26ರಂದು ಬೆಳಿಗ್ಗೆ 10:30ಕ್ಕೆ ಪಾಂಡೇಶ್ವರ ಗ್ರಾಮ ಪಂಚಾಯತ್‌ನ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ನಡೆಯಲಿದೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉಪಸ್ಥಿತಿಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದ್ದು, ಪಾಂಡೇಶ್ವರ ಗ್ರಾಮವು ಈ ಕಾರ್ಯಕ್ರಮದ ವ್ಯಾಪ್ತಿಗೆ ಒಳಪಡಲಿದೆ.
ಪ್ರಜಾಸೇವೆ ಇಲಾಖೆಯ ಅಧಿಕಾರಿಗಳು ಆಂದೋಲನದಲ್ಲಿ ಭಾಗಿಯಾಗಲಿದ್ದಾರೆ ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *