webnews kannada

ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಸಾಫ್ಟ್​ವೇರ್ ಇಂಜಿನಿಯರ್!

ಹೈದರಾಬಾದ್, ಜುಲೈ 19: ಆಕೆಯ ಹೆಸರು ತೇಜಸ್ವಿನಿ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿಯಾದ 25 ವರ್ಷದ ತೇಜಸ್ವಿನಿ ಬೆಂಗಳೂರಿನಲ್ಲಿ (Bengaluru) ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದಲ್ಲಿ ತೀವ್ರ ಒತ್ತಡವನ್ನು ಎದುರಿಸಿದ ಅವರು 6 ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ವಿಶಾಖಪಟ್ಟಣಕ್ಕೆ ತೆರಳಿದ್ದರು. ಇದಾದ ನಂತರ, 2 ತಿಂಗಳ ಹಿಂದೆ ಅವರು ತಮ್ಮ ತಾಯಿ ಅರುಣಾ ಅವರೊಂದಿಗೆ ಹೈದರಾಬಾದ್‌ಗೆ  ಬಂದು ಪೀರ್ಜಾದಿಗುಡದ ಶಂಕರ್‌ನಗರ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ, ಶುಕ್ರವಾರ ಮಧ್ಯರಾತ್ರಿ 2.30ರ ಸುಮಾರಿಗೆ ತೇಜಸ್ವಿನಿ ಎಚ್ಚರಗೊಂಡು ತನ್ನ ತಾಯಿಯ ರೂಮನ್ನು ಹೊರಗಿನಿಂದ ಲಾಕ್ ಮಾಡಿ ಮನೆಯಿಂದ ಹೊರಗೆ ಹೋಗಿದ್ದರು. ಮನೆಯಿಂದ ಹೊರಟ ಆಕೆ ಬೆತ್ತಲೆಯಾಗಿ ನಡೆದುಕೊಂಡು ಹೋಗಿ ದೇವಸ್ಥಾನದೊಳಗೆ ಹೊಕ್ಕು, ಅಲ್ಲಿದ್ದ ದೇವರ ವಿಗ್ರಹವನ್ನು ಹಿಡಿದುಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ!.

ಹೈದರಾಬಾದ್‌ನ ಈ ಯುವತಿಯ ನಿಗೂಢ ಸಾವು ಭಾರಿ ತಲ್ಲಣ ಸೃಷ್ಟಿಸಿದೆ. ಮೃತ ಯುವತಿ ಕೆರೆಗೆ ಜಿಗಿಯುವ ಮುನ್ನ ನಗ್ನ ಸ್ಥಿತಿಯಲ್ಲಿ ದೇವಸ್ಥಾನ ಪ್ರವೇಶಿಸಿ, ದೇವಿಯ ವಿಗ್ರಹವನ್ನು ಹೊತ್ತೊಯ್ದು ಕೆರೆಗೆ ಜಿಗಿದಿದ್ದಾರೆ ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಬೆಳಕಿಗೆ ಬಂದಿದೆ. ಪೊಲೀಸರು ಕೆರೆಯಲ್ಲಿ ನಾಪತ್ತೆಯಾಗಿರುವ ದೇವಿಯ ವಿಗ್ರಹಕ್ಕಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರೂ ಅದಕ್ಕಾಗಿ ಆಕೆ ಆಯ್ದುಕೊಂಡ ಮಾರ್ಗದ ಬಗ್ಗೆ ತೀವ್ರ ಅನುಮಾನ, ನಿಗೂಢ ಪ್ರಶ್ನೆಗಳು ಎದ್ದಿರುವುದರಿಂದ ಪೊಲೀಸರು ಆಕೆಯ ಮಾನಸಿಕ ಸ್ಥಿತಿ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *