webnews kannada

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಫ್ಯಾಷನ್ ಡಿಸೈನ್ ವಿಭಾಗದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಫ್ಯಾಷನ್ ಡಿಸೈನ್ ವಿಭಾಗದ ವತಿಯಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಆಗಿ ಶ್ರೀಮತಿ ಪ್ರೇಮ ಆರ್ ಶೆಟ್ಟಿ,ಇಂಗ್ಲೀಷ್ ಶಿಕ್ಷಕಿ, ಸರಕಾರಿ ಪದವಿ ಪೂರ್ವ ಕಾಲೇಜು ಮುಲ್ಕಿ, ಇವರು ವಹಿಸಿದ್ದರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ” ಫ್ಯಾಷನ್ ಕ್ಷೇತ್ರವೂ ಕೇವಲ ಬಟ್ಟೆಗಳನ್ನು ವಿನ್ಯಾಸ ಮಾಡುವುದು ಮಾತ್ರವಲ್ಲ ಅದು ನಮ್ಮ ಸೃಜನಶೀಲತೆ ಕಲ್ಪನೆ, ಮತ್ತು ಆತ್ಮವಿಶ್ವಾಸವನ್ನು ತೋರಿಸುವ ಒಂದು ಕಲೆಯಾಗಿದೆ ಎ0ದರು, ಹಾಗೂ ಜೀವನದಲ್ಲಿ ಯಶಸ್ಸು ಗಳಿಸಲು ‘ಗುರಿ ನಿಗದಿ’ ಬಹಳ ಮುಖ್ಯ, ಆ ಗುರಿಯನ್ನು ಸಾಧಿಸಲು ದಿನನಿತ್ಯ ಸಣ್ಣ ಸಣ್ಣ ಹೆಜ್ಜೆಗಳನ್ನು ಇಡಬೇಕು, ಈ ಮೂಲಕ ನಿಮ್ಮ ಗುರಿಯನ್ನು ತಲುಪಬಹುದು ಎ0ದರು. ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾಲಕ್ಷ್ಮೀ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ಪ್ರಾ0ಶುಪಾಲರದ ಶ್ರೀಮತಿ ಡಾ, ಸೀಮಾ ಭಟ್. ಕಾಲೇಜಿನ ಆಡಳಿತ ಅಧಿಕಾರಿ ಶ್ರೀಮತಿ ಮಮತಾ. ಉಪ ಪ್ರಾ0ಶುಪಾಲರದ ಶ್ರೀಮತಿ ಸುಜಾತಾ,ಕಾಲೇಜಿನ ಸಾಂಸ್ಕೃತಿಕ ಅಧ್ಯಕ್ಷೆ ಶ್ರೀಮತಿ ರಾಝಿಕ, ಫ್ಯಾಷನ್ ಡಿಸೈನ್ ವಿಭಾಗದ ಮುಖ್ಯಸ್ಥರಾದ ,ಕುಮಾರಿ ಜನಿತಾ ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಪ್ರಥಮ ಎಫ್,ಡಿ ವಿದ್ಯಾರ್ಥಿನಿ ಅಲಿನ ,ಸ್ವಾಗತವನ್ನು ತೃತೀಯ ಎಫ್,ಡಿ ವಿದ್ಯಾರ್ಥಿನಿ ವೃಂದ, ಧನ್ಯವಾದವನ್ನು ದ್ವಿತೀಯ ಎಫ್,ಡಿ ವಿದ್ಯಾರ್ಥಿನಿ ನವ್ಯ ಅವರು ನಡೆಸಿಕೊಟ್ಟರು.

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *