webnews kannada

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ” ಮಹಿಳಾ ಸಬಲೀಕರಣ, ಯೋಗ ಧ್ಯಾನ ಕುರಿತು ಉಪನ್ಯಾಸ ಕಾರ್ಯಕ್ರಮ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ವಿದ್ಯಾರ್ಥಿಗಳಿಗೆ, ಕಾಲೇಜಿನ “ಮಹಿಳಾ ವೇದಿಕೆ’ ವತಿಯಿಂದ “”ಮಹಿಳಾ ಸಬಲೀಕರಣ ಹಾಗೂ ಯೋಗ ಧ್ಯಾನದ ಮೂಲಕ ಮಾನಸಿಕ ಒತ್ತಡ ನಿರ್ವಹಣೆ” ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿಯ “ಅರ್ಟ್ ಆಫ್ ಲಿವಿಂಗ್ ಟ್ರೈನರ್” ಶ್ರೀಮತಿ ಶೈಲಾಜ ಕೃಷ್ಣನಾನಂದ ಇವರು ವಹಿಸಿದ್ದರು.
ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ ಯೋಗವು ದೇಹ – ಮನಸ್ಸಿನ ಸಮತೋಲನವನ್ನು ಕಾಪಾಡುತ್ತದೆ, ನಿಯಮಿತ ಯೋಗಾಭ್ಯಾಸದಿಂದ ನರಮಂಡಲ ಶಾಂತ ವಾಗುತ್ತದೆ, ಹಾರ್ಮೋನ್ ಸಮತೋಲನ ಸುಧಾರಿಸುತ್ತದೆ ಆತಂಕ ಮತ್ತು ಡಿಪ್ರೆಷನ್ ಕಡಿಮೆಯಾಗುತ್ತದೆ ಎ0ದರು. ಧ್ಯಾನ ವು ಮನಸ್ಸಿನ ತರಬೇತಿ, ಇದು ಚಿಂತನೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಮನಸ್ಸಿಗೆ ಶಾಂತಿ ಸ್ಪಷ್ಟತೆ, ಭಾವನಾತ್ಮಕ ಸಮತೋಲನ ಮಾಡುತ್ತದೆ ದಿನಕ್ಕೆ 10-20ನಿಮಿಷ ಧ್ಯಾನ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ ಎ0ದರು.ಈ ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ಆಡಳಿತ ಅಧಿಕಾರಿ ಶ್ರೀಮತಿ ಮಮತಾ, ಕಾಲೇಜಿನ ಪ್ರಾ0ಶುಪಾಲರದ ಶ್ರೀಮತಿ ಡಾ,ಸೀಮಾ ಭಟ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ರಾಝಿಕ, ಮಹಿಳಾ ವೇದಿಕೆಯ ಮುಖ್ಯಸ್ಥರಾದ ಉಪನ್ಯಾಸಕಿ ಕುಮಾರಿ ಸೊಫಿಯ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿ ಆಯಿಷಾ ರಿಝ ದ್ವಿತೀಯ ಬಿಸಿಎ , ಸ್ವಾಗತವನ್ನು ವಿದ್ಯಾರ್ಥಿನಿ ಸುಹಾನಾ ದ್ವಿತೀಯ ಬಿಬಿಎ, ಧನ್ಯವಾದವನ್ನು ವಿದ್ಯಾರ್ಥಿನಿ ತುಷಾರ ತೃತೀಯ ಎಫ್, ಟಿ ಮಾಡಿದರು.

karavalivaninews@gmail.com
Copyright - 2022webnewskannada news wedsite. All rights reserved. ನಮ್ಮ ಈ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ ಆರಂಭವಾದ ವೆಬ್ ನ್ಯೂಸ್ ಕನ್ನಡ ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ಯಶಸ್ವಿಯಾಗಿದೆ ವೆಬ್ ನ್ಯೂಸ್ ಕನ್ನಡ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ ದೋಷಗಳನ್ನು ಸರಿ ಪಡಿಸುವ ಕೆಲಸವನ್ನು ಮಾಡುವಲ್ಲಿ ವೆಬ್ ನ್ಯೂಸ್ ಕನ್ನಡ ತನ್ನ ಕರ್ತವ್ಯ ನಿರ್ವಹಿಸುತ್ತಿದೆ. ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ವೆಬ್ ನ್ಯೂಸ್ ಕನ್ನಡ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ. ಇದು ವೆಬ್ ನ್ಯೂಸ್ ಕನ್ನಡ ಇದು ಕನ್ನಡಿಗರ ಸುದ್ದಿತಾಣ gmail-karavalivaninews@gmail.com
http://webnewskannada.com

Leave a Reply

Your email address will not be published. Required fields are marked *